ರಾತ್ರಿ ಸುರಿದ ಮಳೆಗೆ ಬೆಳೆ ಹಾನಿ: ಹಾನಿ ಪ್ರದೇಶಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ

0
35

ದಾವಣಗೆರೆ: ಭಾನುವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಡಿಕೆ, ಬಾಳೆ, ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕುರುಳಿ ಲಕ್ಷಾಂತರ ನಷ್ಟ ಸಂಭವಿಸಿದೆ.
ತಾಲೂಕಿನ ಅಣಜಿ, ಕಿತ್ತೂರು, ಹೆಮ್ಮನಬೇತೂರು, ಚಿಕ್ಕವ್ವನಾಗತಿಹಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪಪ್ಪಾಯಿ, ಬಾಳೆ, ಅಡಿಕೆ ಹಾಗೂ ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕಪ್ಪಳಿಸಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಶಾಸಕರ ಭೇಟಿ: ಸುದ್ದಿ ತಿಳಿದು ಅಣಜಿ, ಕಿತ್ತೂರು, ಹೆಮ್ಮನಬೇತೂರು, ಚಿಕ್ಕವ್ವನಾಗತಿಹಳ್ಳಿ ಗ್ರಾಮಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಅವರು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ರೇಷ್ಮಾ ಫರ್ವೀನ್, ಕಂದಾಯ ಇಲಾಖೆ ಅಧಿಕಾರಿಗಳ ನಿಯೋಗದೊಂದಿಗೆ ಭೇಟಿ ನೀಡಿ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಯಾದ ಮನೆಗಳ ಬಳಿ ತೆರಳಿ ಪರಿಶೀಲನೆ ನಡೆಸಿದ ಶಾಸಕರು, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು. ಹಾನಿಗೊಳಗಾದ ಮನೆಗಳಿಗೆ ತುರ್ತು ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದರು.

Previous articleಮಂಕುತಿಮ್ಮನ ಕಗ್ಗ ಟ್ರೈಲರ್‌ ಅನಾವರಣ
Next articleತಾಳಿ ತೆಗೆದರೆ ತಪ್ಪಿಲ್ಲ…? ಜನಿವಾರ ತೆಗೆದರೆ ತಪ್ಪು…!