ಬೆಂಗಳೂರು: ವಿಜಯನಗರದ ರಾಜ ಕೃಷ್ಣದೇವರಾಯ ಸಮಾಧಿಯ ಬಳಿ ಮಾಂಸ ಮಾರಾಟಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ
ಇತ್ತಿಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಮಾಧಿಯ ಬಳಿ ಮಾಂಸ ಮಾರಾಟ ದೃಶ್ಯ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು, ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಶುದ್ಧೀಕರಣ ಮಾಡಿದ್ದ ಮೂವರ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆನೆಗುಂದಿ ಗ್ರಾಮದ ಹನುಮಂತ, ಫಕೀರಪ್ಪ, ಹುಲಗಪ್ಪ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶ್ರೀ ಕೃಷ್ಣದೇವರಾಯನ ಸಮಾಧಿ 64 ಸ್ತಂಭಗಳನ್ನು ಹೊಂದಿದ್ದು, ತುಂಗಭದ್ರಾ ನದಿಯ ದಡದಲ್ಲಿದೆ. ಹಂಪಿಗೆ ಭೇಟಿ ನೀಡುವ ಅನೇಕ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ, ಆದರೆ, ಈ ಪ್ರದೇಶವನ್ನು ಮಾಂಸ ಮಾರಾಟಕ್ಕೆ ಬಳಕೆ ಮಾಡಿರುವುದು ವಿರೋಧಕ್ಕೆ ಕಾರಣವಾಗಿತ್ತು