ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ

0
20

ಬೆಂಗಳೂರು: ಕಾಶ್ಮೀರದ ಪಹಲ್​ಗಾಮ್​​ನಲ್ಲಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರ ಮುಂದಾಗಿದೆ.
ಅವರನ್ನು ಕರೆತರಲು ಕರ್ನಾಟಕ ಸರ್ಕಾರ 2 ತಂಡಗಳನ್ನು ಕಳುಹಿಸಿದೆ. ಸಚಿವ ಅನಿಲ್ ಲಾಡ್ ಅವರ ನೇತೃತ್ವದಲ್ಲಿ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ನೀಡಬೇಕೆಂದು ಕೋರಿದೆ.

080-43344334

080-43344335

080-43344336

080-43344342

Previous articleಪಹಲ್ಗಾಮ್‌ ಉಗ್ರರ ದಾಳಿ: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ
Next articleಪಹಲ್ಗಾಮ್ ದಾಳಿ: ಉಗ್ರರಿಗೆ ತಕ್ಕ ಉತ್ತರ ನೀಡಿ: ಕೇಂದ್ರ ಸರ್ಕಾರಕ್ಕೆ VHP ಆಗ್ರಹ