ಪ್ರವಾಸಿಗರ ಮೇಲೆ ಉಗ್ರರ ದಾಳಿ: ಖಂಡನೆ

0
14

ಶಿವಮೊಗ್ಗ: ಕಾಶ್ಮೀರದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆದಿರುವುದನ್ನು ಹಾಗೂ ಧರ್ಮದ ಆಧಾರದಲ್ಲಿ ಉಗ್ರರು ದಾಳಿ ನಡೆಸಿ ಹಲವಾರು ಭಾರತೀಯ ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸಬಾರದು ಎಂದು ಆಗ್ರಹಿಸಿ ನಗರದ ಗೋಪಿ ವೃತ್ತದಲ್ಲಿ ಶಾಂತಿ ನಡಿಗೆ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಕ್ಯಾಂಡಲ್ ಹಚ್ಚುವುದರ ಮೂಲಕ ಮೃತ ಮಂಜುನಾಥ್ ಅವರಿಗೆ ಶ್ರದ್ಧಾಂಜಲಿ ಕೋರಲಾಯಿತು. ಹಾಗೂ ಅಮಾನವೀಯ ಕೃತ್ಯವನ್ನು ಖಂಡಿಸಲಾಯಿತು. ಈ ಸಂದರ್ಭದಲ್ಲಿ ಬೆಕ್ಕಿನ ಕರ್ಮಠ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಬಸವ ಕೇಂದ್ರದ ಶ್ರೀಗಳು. ವಿವಿಧ ಧರ್ಮದ ಮುಖಂಡರು ಸಂಚಾಲಕ ಕೆಪಿ ಶ್ರೀಪಾಲ್ ಮತ್ತಿತರರು ಇದ್ದರು

Previous articleಪಹಲ್ಗಾಮ್‌ ದಾಳಿ: ಜಿಲ್ಲಾ ಯುವ ಕಾಂಗ್ರೆಸ್ ಶ್ರದ್ಧಾಂಜಲಿ
Next articleಹಿಂದುಗಳ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ