ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸದೇ ಇದ್ದುದಕ್ಕೆ ಅನ್ಯಕೋಮಿನ ಯುವಕರು ಚಾಲಕ ಮತ್ತು ನಿರ್ವಾಹಕರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ರಸ್ತೆಯಲ್ಲಿ ನಡೆದಿದೆ.
ಕಲ್ಲು ತೂರಾಟದ ವೇಳೆ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ. ಬಳಿಕ ಯುವಕರನ್ನು ಹಿಡಿದು ಥಳಿಸಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುಂಡಾಟ ಮಾಡಿದ ಅನ್ಯಕೋಮಿನ ಕುಟುಂಬದವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























