ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಸಾರ್ವಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದ್ದು ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಅಸಮಾಧಾನ ವ್ಯಕ್ತಪಡಿಸಿದೆ.
ಕ್ರಿಮಿನಲ್ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಆದೇಶಕ್ಕೆ ಪೀಠವು ತಡೆ ನೀಡಿದ್ದು ಇದೇ ರೀತಿಯ ಹೇಳಿಕೆ ನೀಡಿದರೆ ನ್ಯಾಯಾಲಯ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರಿದ್ದ ಪೀಠ ಹೇಳಿದೆ.