ರ‍್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ : ಹೈಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಆದೇಶ

0
33

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.
ಊಬರ್, ಓಲಾ, ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ನ್ಯಾಯಾಲಯ ನೀಡಿದ್ದ ಆರು ವಾರಗಳ ಗಡುವಿನ ಹಿನ್ನೆಲೆಯಲ್ಲಿ ಬೈಕ್ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಹೈಕೋರ್ಟ್‌ ಖಾಸಗಿ ಬಳಕೆಗೆ ಖರೀದಿ ಮಾಡುವ ಬೈಕ್ ಗಳನ್ನು ವಾಣಿಜ್ಯ ಉದ್ದೇಶದಿಂದ ಬಾಡಿಗೆಗಾಗಿ ಬಳಸುವುದನ್ನು ಪ್ರಶ್ನೆ ಮಾಡಿತ್ತು. ಈ ಸಂಬಂಧ ಬೈಕ್‌ ಟ್ಯಾಕ್ಸಿ ಸೇವೆ ನೀಡುವ ಓಲಾ, ಊಬರ್ ಮತ್ತು ರಾಪಿಡೋ ಕಂಪನಿಗಳಿಗೆ ಆರು ವಾರದಲ್ಲಿ ಸೇವೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಿತ್ತು. ಈ ಸಂಬಂಧ ನಿಗಾವಹಿಸುವಂತೆ ಸರಕಾರಕ್ಕೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕ್ರಮವಹಿಸಿದೆ.

Previous articleಕಾಶ್ಮೀರ ಸಮಸ್ಯೆಗೆ ಕಾಂಗ್ರೆಸ್ ಕಾರಣ
Next articleಸಿಡಿಲಿಗೆ ಹೊತ್ತಿ ಉರಿದ ವಾಹನ