ಪಾಕಿಸ್ತಾನ ಲಾಹೋರ್‌ ವಿಮಾನ ನಿಲ್ದಾಣದಲ್ಲಿ ಭಾರೀ ಅಗ್ನಿ ಅವಘಡ: ವಿಮಾನಗಳ ಹಾರಾಟ ರದ್ದು

0
27

ಲಾಹೋರ್: ಪಾಕಿಸ್ತಾನದ ಲಾಹೋರ್‌ನಲ್ಲಿರುವ ಅಲ್ಲಾಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪಾಕಿಸ್ತಾನ ಸೇನಾ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ಟೈರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ವರದಿ ಮಾಡಿವೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ವಾಹನಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಗಿದ್ದು, ಘಟನೆಯ ಪರಿಣಾಮವಾಗಿ, ರನ್‌ವೇಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ವಿಮಾನ ನಿಲ್ದಾಣದಲ್ಲಿ ಇದ್ದ ಜನರು ಹೊಗೆಯಿಂದಾಗಿ ಹೇಗೆ ಕಷ್ಟಪಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 32 ಸೆಕೆಂಡುಗಳ ವಿಡಿಯೋದಲ್ಲಿ, ಪ್ರಯಾಣಿಕರು ಘಟನೆಯ ಬಗ್ಗೆ ಚರ್ಚಿಸುತ್ತಿರುವುದನ್ನು ಕಾಣಬಹುದು. ಆದರೆ ಯಾವುದೇ ಸಾವು-ನೋವುಗಳು ದಾಖಲಾಗಿಲ್ಲ.

Previous articleಅಮಾನವೀಯ ಹತ್ಯಾಕಾಂಡವನ್ನು ಉಗ್ರವಾಗಿ ಖಂಡಿಸೋಣ
Next articleಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ