ಕಲಬುರಗಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ಸೇಡಂ ತಾಲ್ಲೂಕಿನ ಮಳಖೇಡ ಬಳಿ ನಡೆದಿದೆ.
ಮಹೇಶ್ (32), ಪ್ರೇಮ್ ಕುಮಾರ್ (25) ಮತ್ತು ಅನ್ನದಾನಯ್ಯ (25) ಮೃತಪಟ್ಟಿರುವ ದುರ್ದೈವಿಗಳು ಎಂದು ತಿಳಿದು ಬಂದಿದೆ.
ನಿತ್ಯಾನಂದ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮದುವೆ ಕಾರ್ಡ್ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.