ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪಾಕಿಸ್ತಾನ ಮೂಲದ ಭಯೋತ್ಪಾದಕರು ಭಾರತದ ಹಿಂದೂ ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಪೈಶಾಚಿಕ ಕೃತ್ಯವನ್ನು ಎಸೆಗಿದ್ದು, ಈ ಘಟನೆಯನ್ನು ದೇಶ ಸೇರಿದಂತೆ ಅಂತಾರಾಷ್ಟ್ರೀಯ ಸಮುದಾಯ ಖಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಯುದ್ಧವನ್ನು ಬಯಸುವುದಿಲ್ಲ, ಶಾಂತಿ ಬಯಸುತ್ತೇನೆ ಎಂದಿದ್ದ ಅವರು. ನಾನು ಹಾಗೆ ಹೇಳಿಯೇ ಇಲ್ಲ ಎಂದು ಹೇಳುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ಸರ್ವ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳಿಗೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಮನಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಮೇಲೆ ವಿಶ್ವಾಸವಿಲ್ಲ ಎಂಬುದು ಎದ್ದು ಕಾಣುತ್ತದೆ ಎಂದಿದ್ದಾರೆ.