18 ಶಾಸಕರ ಅಮಾನತು ರದ್ದು ಒಬ್ಬನೇ ನಿರ್ಧರಿಸಲಾಗದು

ಮಂಗಳೂರು: ವಿಧಾನ ಸಭೆಯ ಕಲಾಪದ ಸಂದರ್ಭದಲ್ಲಿ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವ ಕ್ರಮದ ಬಗ್ಗೆ ಮರು ಪರಶೀಲನೆಗೆ ವಿಪಕ್ಷ ನಾಯಕರ ಮನವಿ ಬಂದಿದೆ. ಸಂವಿಧಾನದ ಪೀಠಕ್ಕೆ ಅಗೌರ ತೋರಿದ ಹಿನ್ನೆಲೆಯಲ್ಲಿ ಸದನದಲ್ಲಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಸದನದಲ್ಲಿ ಮಾತ್ರ ಮರು ಪರಿಶೀಲಿಸಿ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಯು.ಟಿ. ಖಾದರ್ ಹೇಳಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮ ಕೈಗೊಳ್ಳಲು ಕೆಲವು ಶಾಸಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸು ಮಾಡಲಾಗಿದೆ. ಶಾಸಕರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳಲು ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಸಮಿತಿ ತೀರ್ಮಾನಿಸಲಿದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.