ನೈತಿಕ ಹೊಣೆ ಹೊತ್ತು ಮೋದಿ ರಾಜೀನಾಮೆ ನೀಡಲಿ: ವಿ.ಎಸ್ ಉಗ್ರಪ್ಪ
ರಾಯಚೂರು: ಕೇಂದ್ರ ಸರ್ಕಾರದ ಆಂತರಿಕ ಭದ್ರತೆಯ ವೈಫಲ್ಯದ ಪರಿಣಾಮ ಕಾಶ್ಮೀರದ ಪಹಲ್ಗಾಮ್ ಘಟನೆಗೆ ಕಾರಣವಾಗಿದೆ. ಕೇಂದ್ರದ ಗುಪ್ತಚರ ಇಲಾಖೆಯ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಅಂದು ಅನೇಕರು ಮೃತಪಟ್ಟರು ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆರೋಪಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಕಾಶ್ಮೀರಕ್ಕೆ ೨೦೦ ಕೆ.ಜಿಯ ಆರ್‌ಡಿಎಕ್ಸ್ ಹೇಗೆ ಸಾಗಿಸಲಾಯಿತು. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರ ಇದುವರೆಗೆ ಹೇಳಿಲ್ಲ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೆ 3982 ಅನೇಕ ಉಗ್ರರ ದಾಳಿಯಾಗಿವೆ. 413 ನಾಗರಿಕರು ಸಾವನ್ನಪ್ಪಿದ್ದಾರೆ. 630 ಜನ ಭದ್ರತಾದವರು ಸಾವನ್ನಪ್ಪಿದ್ದಾರೆ ಎಂದು ದೂರಿದರು.
ಪಹಲ್ಗಾಮ್‌ಯಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ ಘಟನೆ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆಯವರು ಸರ್ವಪಕ್ಷದ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದರು. ಆಗ ದುಬೈ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿಯವರು ಪ್ರವಾಸ ರದ್ದುಪಡಿಸಿ, ಸಭೆಗೆ ಬರದೇ ಇರುವುದು ಖಂಡನೀಯ ಎಂದು ದೂರಿದರು.