ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ನೇಮಕ

0
20

ನವದೆಹಲಿ: ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಿಸಲಾಗಿದೆ. ಅವರು ಮೇ 14, 2025ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಾಮಾಜಿಕ ಮಾಧ್ಯಮದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಪೂರ್ಣಗೊಂಡ ಬಳಿಕ ಮೇ 14ರಂದು ನ್ಯಾ. ಗವಾಯಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನ್ಯಾ. ಗವಾಯಿ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಏ. 16ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ನ್ಯಾ. ಗವಾಯಿ ಅವರ ಅಧಿಕಾರವಧಿಯು ಆರು ತಿಂಗಳವರೆಗೆ ಇರಲಿದೆ. ನವೆಂಬರ್‌ನಲ್ಲಿ ಅವರಿಗೆ 65 ವರ್ಷ ಪೂರ್ಣಗೊಳ್ಳಲಿದ್ದು, ಅಂದು ಅವರು ನಿವೃತ್ತರಾಗಲಿದ್ದಾರೆ.
ಭೂಷಣ್ ಗವಾಯಿ ಅವರು ನವೆಂಬರ್ 24, 1960ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಜನಿಸಿದರು. ಅವರ ತಂದೆ ದಿವಂಗತ ಆರ್.ಎಸ್. ಗವಾಯಿ ಅವರು ಬಿಹಾರ ಮತ್ತು ಕೇರಳದ ಮಾಜಿ ರಾಜ್ಯಪಾಲರು ಮತ್ತು ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತರಾಗಿದ್ದರು.

Previous articleಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ
Next articleದುಷ್ಕರ್ಮಿಗಳಿಂದ ಅಡಿಕೆ ಗಿಡಗಳ ನಾಶ: ಪರಿಶೀಲನೆ