ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಮೇ 2ರಂದು ಪ್ರಕಟವಾಗಲಿದೆ.
ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಫಲಿತಾಂಶದ ಕುರಿತು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ.
ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ನಾಳೆ ಮಧ್ಯಾಹ್ನ 12:30 ಬಳಿಕ ವೀಕ್ಷಿಸಬಹುದು.