ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತನೋರ್ವನ ಮೇಲೆ ತಲವಾರಿನಿಂದ ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ.
ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ತಲವಾರಿನಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೂಡಲೇ ಸುಹಾಸ್‌ನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತಾದರೂ, ತೀವ್ರ ರಕ್ತಸ್ರಾವ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾರೆ.
ಸದ್ಯ ಆಸ್ಪತ್ರೆ ಎದುರು ಹಿಂದೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಆಸ್ಪತ್ರೆಗೆ ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರ ಆಗಮಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

























