“ಸರ್ಕಾರಿ ನ್ಯಾಯಬೆಲೆ ಅಂಗಡಿ” ಯಲ್ಲಿ ಬಂಗಾರಪ್ಪ

0
41

ಬೆಂಗಳೂರು: ನಾಯಕ ನಟ ಹಾಗೂ ಮಾಜಿ ಶಾಸಕ ಕುಮಾರ ಬಂಗಾರಪ್ಪ “ಸರ್ಕಾರಿ ನ್ಯಾಯಬೆಲೆ ಅಂಗಡಿ” ಚಿತ್ರದ ಮೂಲಕ ಮತ್ತೆ ನಟನೆಗೆ ಮರಳಿದ್ದಾರೆ.
ಜಯಶಂಕರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ತೇಜುಮೂರ್ತಿ ಹಾಗೂ ಎಸ್.ಪದ್ಮಾವತಿ ಚಂದ್ರಶೇಖರ್ ಅವರುಗಳು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಹಿರಿಯ ನಿರ್ದೇಶಕರಾದ ಬಿ.ರಾಮಮೂರ್ತಿ ಅವರು ರಚಿಸಿದ್ದಾರೆ, ಪವನ್ ನಿರ್ದೇಶನದಲ್ಲಿ ಸಿದ್ದವಾಗುತ್ತಿರುವ ಈ ಚಿತ್ರಕ್ಕೆ ನಾಯಕಿಯಾಗಿ ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಒಕ್ಕೂಟದ ಅಧ್ಯಕ್ಷರಾದ ಟಿ.ಕೃಷ್ಣಪ್ಪ ಅವರೂ ಸಹ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತಿಚೆಗೆ ಚಿತ್ರದ ಮುಹೂರ್ತ ದೃಶ್ಯಕ್ಕೆ ಹಿರಿಯನಟ ಶ್ರೀನಾಥ್ ಅವರು ಕ್ಲಾಪ್ ಮಾಡಿ ಶುಭ ಹಾರೈಸಿದರು, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಕೆ.ಹೆಚ್.ಮುನಿಯಪ್ಪ ಹಾಗೂ ಶಾಸಕ, ಎಲ್. ಶಿವರಾಮೇಗೌಡರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

Previous articleಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪೊಲೀಸರ ನೇರ ಕೈವಾಡ
Next articleದ.ಕ. ಜಿಲ್ಲಾ ಬಂದ್‌ಗೆ ಕರೆ: ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು