ಚಿತ್ರದುರ್ಗ: ಸುಪ್ರೀಂಕೋರ್ಟ್ ಆದೇಶವನ್ನು ಬಚ್ಚಿಟ್ಟು ಒಳ ಮೀಸಲಾತಿಗಾಗಿ ಮತ್ತೊಮ್ಮೆ ಜಾತಿ ಗಣತಿ ಆರಂಭಿಸಿರುವುದರಲ್ಲಿ ಅರ್ಥವಿಲ್ಲ. ಸರ್ವೇ ಕಾರ್ಯದ ಜೊತೆ ಕಮಿಟಿ ರಚಿಸಿರುವುದು ಏಕಪಕ್ಷೀಯವಾಗಿದೆ. ಸಮನ್ವಯ ಸಮಿತಿ ಸರಿಪಡಿಸಬೇಕೆಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿಗಣತಿ ಆರಂಭಿಸಿರುವುದನ್ನು ರಾಜ್ಯ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ, ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಒತ್ತಡಕ್ಕೆ ಮಣಿದು ಗಣತಿ ನಡೆಸುತ್ತಿದೆ ಎಂದು ಅಪ ಪ್ರಚಾರದಲ್ಲಿ ತೊಡಗಿದ್ದಾರೆ. ಅವಕಾಶ ವಂಚಿತ ಸಮುದಾಯಗಳನ್ನು ಗುರುತಿಸಿ ಸೌಲಭ್ಯ ಒದಗಿಸುವುದು ಕೇಂದ್ರದ ಜಾತಿ ಗಣತಿ ಉದ್ದೇಶ ಎಂದು ಹೇಳಿದರು.