‘ಆಪರೇಷನ್ ಸಿಂಧೂರ್: ಕಾಂಗ್ರೆಸ್ ಪಕ್ಷದಿಂದ ಸಂಪೂರ್ಣ ಬೆಂಬಲ

0
29

ನವದೆಹಲಿ: ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿರುವ ಭಯೋತ್ಪಾದಕ ನೆಲೆಗಳ ವಿರುದ್ಧ ದಿಟ್ಟ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವ ಮೂಲಕ ಸೂಕ್ತ ಪ್ರತ್ಯುತ್ತರ ನೀಡಿದ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ನಮ್ಮ ವೀರ ಸೈನಿಕರ ಧೈರ್ಯ, ದೃಢನಿಶ್ಚಯ ಮತ್ತು ದೇಶಭಕ್ತಿಗೆ ನಾವು ವಂದಿಸುತ್ತೇವೆ ‘ಆಪರೇಷನ್ ಸಿಂಧೂರ್’ಗೆ ಕಾಂಗ್ರೆಸ್ ಪಕ್ಷದಿಂದ ಸಂಪೂರ್ಣ ಬೆಂಬಲವಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಿಂಧೂರ ಕಾರ್ಯಾಚರಣೆ ಕುರಿತಂತೆ ಮಧ್ಯಾಹ್ನ ನಡೆದ ಕಾಂಗ್ರೆಸ್‌ ಸಭೆಯ ಬಳಿಕ ಮಾತನಾಡಿದ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ದಿನದಿಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಶಸ್ತ್ರ ಪಡೆಗಳು ಮತ್ತು ಸರ್ಕಾರದೊಂದಿಗೆ ನಿಸ್ಸಂದಿಗ್ಧವಾಗಿ ಒಗ್ಗಟ್ಟಿನಿಂದ ನಿಂತಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಪ್ರತಿಯೊಂದು ನಿರ್ಣಾಯಕ ಕ್ರಮವನ್ನು ಬೆಂಬಲಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತದ ರಾಷ್ಟ್ರೀಯ ನೀತಿಯು ಅತ್ಯಂತ ಸ್ಪಷ್ಟ ಮತ್ತು ಅಚಲವಾಗಿದೆ. ಮಹಾನ್ ಭಾರತೀಯ ರಾಷ್ಟ್ರದ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ಎಲ್ಲಾ ಹಂತಗಳಲ್ಲಿಯೂ ಏಕತೆಯ ಅವಶ್ಯಕತೆಯಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶದ ವೀರ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ. ನಮ್ಮ ವೀರರು ದೇಶದ ಏಕತೆ ಮತ್ತು ಸಮಗ್ರತೆಗಾಗಿ ಯಾವಾಗಲೂ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ, ರಾಷ್ಟ್ರೀಯ ಹಿತಾಸಕ್ತಿಯನ್ನು ಅತ್ಯಂತ ಪ್ರಮುಖವಾಗಿ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದರು.

Previous articleದೇಶದ ಹಿತ ಕಾಪಾಡಲು ಒಟ್ಟಾಗಿರಬೇಕು
Next articleವಿಕೃತಿ ಮೆರೆದ ಉಗ್ರರಿಗೆ ಮೋದಿ ದಿಟ್ಟ ಉತ್ತರ