ಟ್ರಂಪ್ ಮಧ್ಯಸ್ಥಿಕೆ: ಭಾರತ- ಪಾಕ್ ನಡುವೆ ಕದನ ವಿರಾಮ

ನವದೆಹಲಿ : ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಡೊನಾಲ್ಡ್ ಟ್ರಂಪ್ ಪೋಸ್ಟ್‌ ಮಾಡಿದ್ದು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದನ್ನು ಘೋಷಣೆ ಮಾಡಲು ನನಗೆ ತುಂಬಾ ಸಂತಸವಾಗುತ್ತಿದೆ. ಈ ಒಂದು ನಿರ್ಧಾರದಿಂದ ಎರಡು ದೇಶಗಳಿಗೂ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

5 ಗಂಟೆಯಿಂದ ಕದನ ವಿರಾಮ: ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ, ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ’ ಎಂದು ತಿಳಿಸಿದರು. ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.