Home ನಮ್ಮ ಜಿಲ್ಲೆ ತುಮಕೂರು ಇಡಿ ದಾಳಿ: ಗೃಹ ಸಚಿವ ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ದಾಳಿ

ಇಡಿ ದಾಳಿ: ಗೃಹ ಸಚಿವ ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ದಾಳಿ

0
221

ತುಮಕೂರು: ಇಡಿ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರಗೆ ಶಾಕ್ ನೀಡಿದೆ. ಸಚಿವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದ್ದು. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ 2019ರಲ್ಲಿಯೂ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು.