Home Advertisement
Home ತಾಜಾ ಸುದ್ದಿ ರನ್ಯಾರಾವ್‌ಗೆ ಪರಂ 25 ಲಕ್ಷ ಹಣ ನೀಡಿರಬಹುದು

ರನ್ಯಾರಾವ್‌ಗೆ ಪರಂ 25 ಲಕ್ಷ ಹಣ ನೀಡಿರಬಹುದು

0
174

ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ. ರನ್ಯಾ ರಾವ್‌ಗೆ ೨೫ ಲಕ್ಷ ರೂ. ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೆಂದು ಆ ಹಣ ಕೊಟ್ಟಿರಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿ ಅವರ ಜತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು ಬೇಕಾದಷ್ಟು ಜನ ಟ್ರಸ್ಟ್ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳನ್ನು ಕೊಟ್ಟಿರಬಹುದು. ಪರಮೇಶ್ವರ್ ಅವರಂತಹ ಪ್ರಭಾವಿ ವ್ಯಕ್ತಿ ಬೇರೆಯವರಿಗೆ ಸ್ಮಗ್ಲಿಂಗ್ ಮಾಡಲು ಹೇಳಲು ಸಾಧ್ಯವೇ. ಈ ರೀತಿ ಯಾವುದೇ ರಾಜಕಾರಣಿ ಹೇಳಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡರು.