ನಮ್ಮ ಮೆಟ್ರೋ ನೇರಳೆ ಮಾರ್ಗ: ಸಂಚಾರ ಪುನಾರಂಭ

0
13

ತಾಂತ್ರಿಕ ದೋಷ ಹಿನ್ನೆಲೆ ಸ್ಥಗಿತಗೊಂಡಿದ್ದ ವೈಟ್‌ಫೀಲ್ಡ್‌ ಮೆಟ್ರೊ ನಿಲ್ದಾಣದ ರೈಲು ಸಂಚಾರ ಪುನಾರಂಭ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗ (ಕಾಡುಗೋಡಿ) ಮಾರ್ಗದಲ್ಲಿ ರೈಲು ಸಂಚಾರ ಪುನಾರಂಭಗೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.
ನೇರಳೆ ಮಾರ್ಗದ ವೈಟ್ ಫೀಲ್ಡ್(ಕಾಡುಗೋಡಿ)ಮೆಟ್ರೊ ಸ್ಟೇಷನ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಈ ನಿಲ್ದಾಣದಿಂದ ಇಂದು ಬೆಳಗ್ಗೆ 5 ಗಂಟೆಯಿಂದ ನೇರಳೆ ಮಾರ್ಗದ ರೈಲುಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು, ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 9.55 ರಿಂದ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿದೆ.

Previous articleರಸ್ತೆಗಳ ಅಭಿವೃದ್ದಿಯ ಪಥ ‘ಕಲ್ಯಾಣ‘ಕ್ಕೆ ನಿಜಾರ್ಥ
Next articleಶಾಸಕ ಹರೀಶ್ ಪೂಂಜ ವಿರುದ್ದದ ಪ್ರಕರಣಕ್ಕೆ ಹೈಕೊರ್ಟ್ ತಡೆ