ಶ್ರೀ ಕ್ಷೇತ್ರ ಕುಕ್ಕೆಯಲ್ಲಿ ಶೀಘ್ರವವೇ ಬೆಳಗ್ಗಿನ ಉಪಾಹಾರ

0
24

ಮಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನೆ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಪ್ರಥಮ ಸಭೆ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದು ಭಕ್ತರಿಗೆ ಬೆಳಗ್ಗಿನ ಉಪಾಹಾರ ಯೋಜನೆ ಆರಂಭಿಸುವ ಕುರಿತು ಚರ್ಚಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದಲ್ಲಿ ಕ್ಷೇತ್ರದ ವತಿಯಿಂದ ಭಕ್ತರಿಗೆ ಬೆಳಗ್ಗಿನ ಉಪಾಹಾರ ನೀಡುವ ಯೋಜನೆ ಆರಂಭಿಸುವ ಬಗ್ಗೆ ಚರ್ಚಿಸಲಾಯಿತು. ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಯೋಜನೆ ಆರಂಭಕ್ಕೆ ಸಹಮತ ಸೂಚಿಸಿದರು. ಶೀಘ್ರದಲ್ಲಿ ಬೆಳಗ್ಗಿನ ಉಪಾಹಾರ ಯೋಜನೆ ಆರಂಭಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

ಆಶ್ಲೇಷ ಸೇವೆಗೆ ಹೊಸ ಕಟ್ಟಡ: ಕ್ಷೇತ್ರದಲ್ಲಿ ಆಶ್ಲೇಷ ಸೇವೆ ನಡೆಸಲು ಹೊಸ ಕಟ್ಟಡ ನಿರ್ಮಿಸಲು ಈ ಹಿಂದೆ ದಾನಿ ಗಳೋರ್ವರು ಮುಂದೆ ಬಂದಿದ್ದರು. ಆದರೆ ಕಟ್ಟಡ ಕಾಮಗಾರಿ ಆರಂಭಗೊಂಡಿರಲಿಲ್ಲ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಆಶ್ಲೇಷ ಸೇವೆ, ಪೂಜೆ ನಡೆಸುವ ಹೊಸ ಕಟ್ಟಡ ಕಾಮಗಾರಿಗೆ ಆದಷ್ಟು ಬೇಗ ಚಾಲನೆ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

Previous articleಪತ್ನಿಯ ಸೀಮಂತದಂದೇ ಪತಿ ಸಾವು
Next articleರಾಮನಗರ ಹೆಸರು ಬದಲಾವಣೆ ಹಿಂದೆ ಲ್ಯಾಂಡ್ ಮಾಫಿಯಾ