ಭಾರೀ ಗಾಳಿ-ಮಳೆ: ಕಾರು ಪಲ್ಟಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಪ್ರವಾಸಿ ಕಾರು ಪಲ್ಟಿಯಾದ ಘಟನೆ ಇಂದು ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ.
ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ-ಮಳೆಗೆ ಮತ್ತೊಂದು ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿದೆ.
ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಸಮಾಜ ಸೇವಕ ಆರೀಫ್‌ ಅವರಿಂದ ಕಾರಿನಲ್ಲಿದ್ದವರನ್ನು ರಕ್ಷಿಸಲಾಗಿದೆ.
ಸೊಂಟಕ್ಕೆ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.