ವಿಧಾನಸೌಧ ಗೈಡೆಡ್ ಟೂರ್

0
22

ಬೆಂಗಳೂರು: ಗೈಡೆಡ್ ಟೂರ್ ಮೂಲಕ ವಿಧಾನಸೌಧದ ಪರಂಪರೆ, ಭವ್ಯತೆ, ಇತಿಹಾಸ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉದ್ದೇಶವಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧ ನಮ್ಮದು ಎಂಬ ಭಾವನೆ ಜನರಿಗೆ ಬರಬೇಕು. ಗೈಡೆಡ್ ಟೂರ್ ಬಗ್ಗೆ ಸಿಎಂ ಜೊತೆ ಚರ್ಚಿಸಿ ಆರಂಭಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಗೆ ಈ ಪ್ರವಾಸದ ಹೊಣೆ ವಹಿಸಲಾಗಿದೆ. ಎಂದರು.
ಗೈಡೆಡ್ ಟೂರ್ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಉಳಿದಂತೆ 16 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಲಾ 50 ರೂ. ನಿಗದಿಪಡಿಸಲಾಗಿದೆ. ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ವಿಧಾನಸಭೆ ವೀಕ್ಷಣೆಗೆ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

Previous articleಆಟೋ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು
Next articleಮುಂದುವರೆದ ಮಳೆ: ಅಪಾರ ಹಾನಿ