ಖಾಸಗಿ ಬಸ್, ಕಾರು ನಡುವೆ ಅಪಘಾತ

0
26

ಮಂಗಳೂರು: ಪುತ್ತೂರಿನಿಂದ ಮಂಗಳೂರಿನತ್ತ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದ ಘಟನೆಯಲ್ಲಿ ತಂದೆ, ಮಗಳು ಗಂಭೀರ ಗಾಯಗೊಂಡಿದ್ದಾರೆ.
ಜಿಲ್ಲೆಯ ಪುತ್ತೂರಿನ ಮುರದಲ್ಲಿ ಈ ಘಟನೆ ನಡೆದಿದ್ದು ಕಾರು ಚಾಲಕ ಬಲಕ್ಕೆ ತೆಗೆದುಕೊಳ್ಳುವಾಗ ಕಾರಿನ ಹಿಂಬದಿಗೆ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಕರಿದ್ದರು. ತಂದೆ ಹಾಗೂ ಮಗಳಿಗೆ ಗಂಭೀರ ಗಾಯಗಳಾಗಿದ್ದು, ಪವಾಡ ಸದೃಶ್ಯವಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಲಾರಿ ಪಲ್ಟಿ: ಚೆಲ್ಲಾಪಿಲ್ಲಿಯಾದ ಔಷಧ ಬಾಕ್ಸ್‌ಗಳು
Next articleಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ