ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಬೃಹತ್ ಪ್ರತಿಭಟನೆ

0
68

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ತುಮಕೂರು ಜಿಲ್ಲೆಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು 144 ಸೆಕ್ಷನ್ ಜಾರಿಯ ನಡುವೆಯೂ ರೈತ ಸಂಘಟನೆ ಹಾಗೂ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ.

ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಸುಂಕಾಪುರ ನಾಲೆ ಸುತ್ತ 10ಕಿ.ಮಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದ್ದು ಈ ವ್ಯಾಪ್ತಿಯ ಹೊರಗೆ ರೈತ ಮುಖಂಡರು, ಜನಪ್ರತಿನಿಧಿಗಳು ಸೇರಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ಶಾಸಕ ಸುರೇಶ್ ಗೌಡ, ಜ್ಯೋತಿ ಗಣೇಶ್, ಜಿಲ್ಲಾಧ್ಯಕ್ಷ ರವಿಶಂಕರ್, ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ನೇತೃತ್ವದಲ್ಲಿ ಹೋರಾಟ ಮಾಡಲಾಗುತ್ತಿದೆ. ಸರ್ಕಾರ ತುಮಕೂರು ರೈತರ ನೀರಾವರಿ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿಸಿ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯುವ ಕೆಲಸ ಪೊಲೀಸರು ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಗುಬ್ಬಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Previous articleಭಾರತದ ‘ಟೈಗರ್ ಮ್ಯಾನ್’ ಖ್ಯಾತಿಯ ಥಾಪರ್ ನಿಧನ
Next articleಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು