ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ನಿಂದ ನೋಟಿಸ್‌

0
28
ಕಾಂಗ್ರೆಸ್‌

ಮಂಗಳೂರು: ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರಿಗೆ ಪಕ್ಷದಿಂದಲೇ ನೋಟಿಸ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹುದ್ದೆಗೆ ರಾಜೀನಾಮೆ ಕೊಟ್ಟು ಸಂಚಲನ ಮೂಡಿಸಲು ಸಜ್ಜಾಗಿದ್ದ ಮುಖಂಡರಿಗೆ ಪಕ್ಷದ ಹಿರಿಯ ನಾಯಕರು ಕರೆ ಮಾಡಿ ಪಕ್ಷಕ್ಕೆ ರಾಜೀನಾಮೆ ನೀಡುವಂತಹ ದುಡುಕಿನ ಕ್ರಮ ಕೈಗೊಳ್ಳದಂತೆ ತಿಳಿಸಿದರೂ ಸಭೆ ನಡೆಸಿದ್ದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಯಾರೂ ಮಾತನಾಡಬೇಡಿ ಎಂದು ಹೇಳಿಕೆ ನೀಡಿದ್ದ ಮಾಜಿ ಮೇಯರ್ ಕೆ.ಅಶ್ರಫ್ ಅವರಿಗೂ ನೋಟಿಸ್ ನೀಡಲಾಗಿದೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್ ಅವರು ನೋಟಿಸ್‌ ನೀಡಿದ್ದಾರೆ.

Previous articleಅವರಿಗೆ ಸಂಸ್ಕೃತದ ವ್ಯಾಮೋಹ ವಿಪರೀತ ಇದ್ದಂತಿದೆ
Next articleಆಹಾರ ಒದಗಿಸುವಲ್ಲಿ ನಿರ್ಲಕ್ಷ್ಯ:  ನಗರಸಭಾ ಕಮಿಷನರ್ ಹುದ್ದೆಯಿಂದ ಮುಕ್ತಿ