ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR

ಮಂಗಳೂರು: ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR ದಾಖಲಾಗಿದೆ.
ಇತ್ತಿಚೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಪ್ರಚೋದನಕಾರಿ ಭಾಷಣ ಮಾಡುವವರನ್ನು ಮಟ್ಟಹಾಕ್ತೀವಿ ಎಂದಿದ್ದರು. ಇದೆಲ್ಲದರ ಮಧ್ಯೆ ಇದೀಗ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ. ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್​ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಬಿಎನ್​ಎಸ್​​ 353(2)ರಡಿ ಪ್ರಕರಣದಡಿ ಎಫ್​ಐಆರ್ ದಾಖಲಾಗಿದೆ. ಪ್ರಮೋದ್ ರೈ ನಂದುಗುರಿ, ತಿಲಕ್​ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್​ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್​ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.