ಚಿಕ್ಕಮಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಎಲ್ಲಾ ತನಿಖಾ ಸಂಸ್ಥೆಗಳನ್ನು ಮನಸ್ಸಿಗೆ ಬಂದಂತೆ ಬಳಸುತ್ತಿದೆ. ಈ ಮೂಲಕ ವಿರೋಧಪಕ್ಷಗಳನ್ನು ಹೆದರಿಸಲು ನೋಡುತ್ತಿದೆ ಆದರೆ ಇಲ್ಲಿ ಹೆದರುವವರು ಯಾರು ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಪ್ರಚಾರ ಪಡೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧಡೆ ಇಡಿ ದಾಳಿ ನಡೆಸಿದೆ. ನಮ್ಮ ಶಾಸಕರು ಅವರ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅವರ ಎಲ್ಲಾ ರೀತಿಯ ತನಿಕೆಗೂ ನಾವು ಸಹಕಾರ ನೀಡುತ್ತೇವೆ ಎಂದರು. ಕಾಂಗ್ರೆಸ್ ನಾಯಕ ಭರತ್ ರೆಡ್ಡಿ ಮನೆಯಲ್ಲಿ ಸಿಕ್ಕಿರುವ ಕೈಬರಹದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಪತ್ರ ಸೃಷ್ಟಿ ಮಾಡುವಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಹೇಳಿದರು.