ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್

0
27

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದರಿಂದ, ಕರಾವಳಿ ಭಾಗದಲ್ಲಿ ಜೂನ್ 15ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಜೂನ್ 17 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಇತರ ಸ್ಥಳಗಳಿಗೆ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಜೂನ್ 17ರವರೆಗೆ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ. ಜೂನ್ 21ರಿಂದ ರಾಜ್ಯಾದ್ಯಂತ ಮಳೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

Previous articleಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 7 ಜನರು ಸಾವು
Next articleನಮ್ಮ ಮೇಲೆ ದಾಳಿ ಮಾಡಿದರೆ ಸುಮ್ಮನೆ ಬಿಡುವುದಿಲ್ಲ…