ಶಾಮನೂರು ಮತ್ತೊಂದು ಚುನಾವಣೆಗೆ ನಿಲ್ಲಬಹುದು

ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ

ಸಂ.ಕ.ಸಮಾಚಾರ ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿಸ್ದರಾಮಯ್ಯ ಹೇಳಿದರು.
ನಗರದ ಬಾಪೂಜಿ ಸಮುದಾಯ ಭವನದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಅವರು ಮಾತನಾಡಿದರು.
ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ.ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದರು.
ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.