ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ರೈಲ್ವೇ ಸಂಪರ್ಕ ಸೇತುವೆ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಯಾಗಿದ್ದು ಈ ಸಂಬಂಧ ಶುಕ್ರವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಕ್ಷಣವೇ ಸೇತುವೆ ಇಕ್ಕೆಲಗಳಲ್ಲಿ ನಿಂತ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಜೊತೆಗೆ ಮಳೆ ಕಡಿಮೆಯಾದ ಕೂಡಲೇ ರಸ್ತೆ ದುರಸ್ತಿ ಕಾರ್ಯವನ್ನು ನಿರ್ವಹಿಸಲು ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಪ್ರಮುಖರು ಇದ್ದರು.