ಕೋಲಾರ: ವಿಶ್ವ ಪ್ರಸಿದ್ಧ ಗಿರಿಧಾಮಗಳಲ್ಲಿ ಒಂದಾದ ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟದ ಸಭೆಗೆ ಕ್ಷಣಗಣನೆ ಆರಂಭವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ಸದಸ್ಯರು ಈಗಾಗಲೇ ನಂದಿ ಗಿರಿಧಾಮದ ಬುಡದಲ್ಲಿರುವ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಆವರಣದಲ್ಲಿರುವ ಪುರಾತನ ಪುಷ್ಕರಣಿಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮತ್ತು ಅವರ ಸಂಪುಟ ಸದಸ್ಯರು ದೇವಾಲಯದ ಆವರಣದಲ್ಲಿ ಗ್ರೂಪ್ ಫೋಟೋ ತೆಗೆಸಿಕೊಂಡರು. ಮುಖ್ಯಮಂತ್ರಿಗಳ ದಂಡು ಇದೀಗ ನಂದಿ ಗಿರಿಧಾಮವನ್ನು ಸರ್ಕಾರಿ ಬಸ್ಸಿನಲ್ಲಿ ಹತ್ತುತ್ತಿದೆ.