ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಶಾಲೆಗಳಿಗೆ ರಜೆ

0
91

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ.  ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ  ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 3ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾಫಿನಾಡು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು ಮತ್ತು ವಸ್ತಾರೆ ಹೋಬಳಿಯ ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ  ಆದೇಶದಲ್ಲಿ ತಿಳಿಸಿದ್ದಾರೆ.

Previous articleಮತ್ತೆ ಹಂಸ ರಾಗ ಲಹರಿಯ ಝೇಂಕಾರ
Next articleವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು