ಡಿಕೆಶಿಗೆ ಸಿಎಂ ಆಗುವ ಅವಕಾಶವಿದೆ

0
61

ಕನಕಪುರ(ಬೆಂ.ದಕ್ಷಿಣ ಜಿಲ್ಲೆ): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿ.ಎಂ ಆಗುತ್ತಾರೆ ಎನ್ನುವ ಆಶಾ ಭಾವನೆಯನ್ನು ಬಾಳೆಹೊನ್ನೂರು ರಂಭಾಪುರಿ ಡಾ. ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿ ವ್ಯಕ್ತಪಡಿಸಿದರು.
ಭಾನುವಾರ ತಾಲೂಕಿನ ಕೋಡಿಹಳ್ಳಿ ಹೋಬಳಿ ಬಿಜ್ಜಳ್ಳಿ ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಉತ್ಸವ, ಇಷ್ಟಲಿಂಗ ಪೂಜೆ, ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮ ಜಾಗೃತಿ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಒಬ್ಬ ಸಂಘಟನಾ ಚತುರ, ಪಕ್ಷವನ್ನು ಹೇಗೆ ಮುನ್ನಡೆಸಬೇಕು ಎಂಬುದನ್ನು ಕರಗತ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಿದವರು, ಇವರಿಗೆ ಮುಂದೆ ಉನ್ನತ ಸ್ಥಾನ ಲಭ್ಯವಾಗಲಿದೆ ಎಂದು ಭವಿಷ್ಯ ನುಡಿದರು.

Previous articleಶಾಂತಿ, ತ್ಯಾಗದಿಂದ ಸಿಗುವುದೇ ನಿಜವಾದ ಯಶಸ್ಸು
Next articleಗೋಕಾಕ ಮಹಾಲಕ್ಷ್ಮೀ ಜಾತ್ರೆಗೆ ಮೂವರು ಬಿಜೆಪಿ ರೆಬಲ್ಸ್ ನಾಯಕರ ಆಗಮನ