ರೆಡ್ಡಿ ಸ್ನೇಹ ಕಳೆದುಕೊಳ್ಳಲು ಇಷ್ಟಪಡುವುದಿಲ್ಲ: ಬಿ. ಶ್ರೀರಾಮುಲು

0
9
ರಾಮುಲು

ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಆರಂಭಿಸುತ್ತಾರೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಜನಾರ್ದನ ರೆಡ್ಡಿ ಸಾರ್ವಜನಿಕರ ಬದುಕಲ್ಲಿ ಬರಬೇಕು ಎಂದು ಅಷ್ಟೇ ಹೇಳಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಹ ಅವರನ್ನು ಕೈಬಿಡುವುದಿಲ್ಲ. ಪಕ್ಷದಲ್ಲಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ. ಪಕ್ಷವನ್ನು ಮೀರಿ, ಪಕ್ಷಕ್ಕೆ ತೊಂದರೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಈ ಕುರಿತು ನಾನು ಸಹ ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಿದ್ದೇನೆ. ಮುಖ್ಯಮಂತ್ರಿ ಅವರು ಸಹ ಅವರೊಂದಿಗೆ ಮಾತನಾಡಿದ್ದಾರೆ ಎಂದರು.

ಸ್ನೇಹ ಕಳೆದುಕೊಳ್ಳಲು ಇಷ್ಟಪಡುವುದಿಲ್ಲ:

ಜನಾರ್ದನ ರೆಡ್ಡಿ ಅವರೊಂದಿಗೆ ಯಾವುತ್ತೂ ಸ್ನೇಹ ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ. ಪಕ್ಷ ರಾಜಕೀಯವಾಗಿ ಸ್ಥಾನ, ಮಾನ ನೀಡಿದೆ. ಸ್ನೇಹ ಹಾಗೂ ಪಕ್ಷ ಬಿಡಲಾರದ ಸಂದರ್ಭದಲ್ಲಿ ಪಕ್ಷದ ನಾಯಕರ ಜೊತೆ ಮಾತನಾಡಿದ್ದೇನೆ. ಅವರೇ ಪರಿಹಾರ ಒದಗಿಸುತ್ತಾರೆ ಎಂದು ಹೇಳಿದರು.
ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಸೂದೆ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ. ರಂಪಾಟ ಮಾಡುವುದು ಬೇಡ. ಎಲ್ಲರೂ ಒಮ್ಮತದಿಂದ ಮಸೂದೆ ಪಾಸ್ ಮಾಡಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು. ಉತ್ತರ ಕರ್ನಾಟಕ ಅನೇಕ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಬೇಕಿತ್ತು. ಆದರೆ, ಸಣ್ಣಪುಟ್ಟ ವಿಚಾರಕ್ಕೆ ವಿರೋಧ ಪಕ್ಷದವರು ಸದನವನ್ನೇ ನಡೆಯದಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Previous articleಮಿನಿ ಬಸ್ಸಿಗೆ ಲಾರಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ
Next articleಕೋವಿಡ್ ನೆಪದಲ್ಲಿ ಚುನಾವಣೆ ಮುಂಚಿತವಾಗಿ ನಡೆಸಲು ಚಿಂತನೆ : ಚುನಾವಣೆ ಎದುರಿಸಲು ಸಿದ್ಧ ಎಂದ ಡಿಕೆಶಿ