ಸಂ.ಕ.ಸಮಾಚಾರ ಕಲಬುರಗಿ: ಮುಖ್ಯಮಂತ್ರಿಗಳ ಬದಲಾವಣೆ, 50-50 ಒಪ್ಪಂದದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ, ಅದರ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಲಬುರಗಿಯಲ್ಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ನಗರದಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ವರ್ಷದಿಂದ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನ ಭರವಸೆ ನೀಡಿ ಎರಡು ವರ್ಷದಿಂದ ಅನುಷ್ಠಾನವೂ ಮಾಡಿದ್ದೇವೆ. ಐದು ಗ್ಯಾರಂಟಿಗಳು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಐದು ವರ್ಷಗಳ ಕಾಲ ಇರುತ್ತವೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡುತ್ತಿಲ್ಲ ಎನ್ನುವ ಆರೋಪ ವಿಚಾರವಾಗಿ ಮಾತನಾಡಿ, ಎಲ್ಲಾ ಕ್ಷೇತ್ರಗಳಿಗೆ ಹಣ ಹಂಚಿಕೆ ಆಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗ ಸೇರಿ ಎಲ್ಲಾ ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಲೇ ಇವೆ. ಎಲ್ಲಾ ಗ್ಯಾರಂಟಿಗಳನ್ನ ಕೊಟ್ಟು ಅಭಿವೃದ್ಧಿ ಕೆಲಸಗಳು ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಜನಪರ ಕೆಲಸ ಕೆಲಸಗಳನ್ನು ಮಾಡ್ತಿದ್ದೇವೆ. ಬಿಜೆಪಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಹೇಳಿರಬಹುದು ಎಂದು ಬಿಜೆಪಿ ನಾಯಕರಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಟಾಂಗ್ ಕೊಟ್ಟರು.
ಹೃದಯಾಘಾತ ತನಿಖೆಗೆ ಸಮಿತಿ: ರಾಜ್ಯದಲ್ಲಿ ಹೃದಯಾಘಾತದಿಂದ ಹೆಚ್ಚಿನ ಜನರ ಸಾವು ಪ್ರಕರಣದ ಬಗ್ಗೆ ಜನರಲ್ಲಿ ಗೊಂದಲ ಉಂಟು ಮಾಡುವ ಅವಶ್ಯಕತೆಯಿಲ್ಲ. ಹಾಸನದಲ್ಲಿ ಹೆಚ್ಚು ಜನ ಮೃತಪಟ್ಟಿರುವ ಕುರಿತು ತನಿಖೆ ನಡೆಸಲು ಸಮಿತಿ ರಚನೆ ಆಗಿದೆ. ಸಮಿತಿಯಿಂದ ವರದಿ ಬರಲಿ ನೊಡೋಣ ಎಂದರು.