‘ಕೊತ್ತಲವಾಡಿ’ ಹಾಡಿಗೆ ಶೋತೃಗಳ ಮೆಚ್ಚುಗೆ

0
52

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಆಗಸ್ಟ್ ೧ರಂದು ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾದ ಖುಷಿಯಲ್ಲಿದೆ ಚಿತ್ರತಂಡ. ಇದೀಗ ‘ಕೊತ್ತಲವಾಡಿ’ ಟೈಟಲ್ ಟ್ರ್ಯಾಕ್ ಅನಾವರಣ ಮಾಡಿದೆ ಚಿತ್ರತಂಡ. ಕಿನ್ನಾಳ್ ರಾಜ್ ಸಾಹಿತ್ಯ ಬರೆದಿರುವ ಈ ಗೀತೆಗೆ ವ್ಯಾಸರಾಜ್ ಸೋಸಲೆ ಧ್ವನಿಗೂಡಿಸಿದ್ದಾರೆ. ವಿಕಾಸ್ ವಸಿಷ್ಠ ಸಂಗೀತದಲ್ಲಿ ಮೂಡಿಬಂದಿರುವ ಈ ಹಾಡು ನಾಯಕನ ಶೌರ್ಯವನ್ನು ವರ್ಣಿಸುವಲ್ಲಿ ಶಕ್ತವಾಗಿ ಮೂಡಿಬಂದಿದ್ದು, ಕೇಳುಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

ಈ ಚಿತ್ರಕ್ಕೆ ಯುವ ಪ್ರತಿಭೆ ಶ್ರೀರಾಜ್ ಆಕ್ಷನ್ ಕಟ್ ಹೇಳಿದ್ದು, ಪೃಥ್ವಿ ಅಂಬರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಇತರರು ತಾರಾಬಳಗದಲ್ಲಿದ್ದಾರೆ. ಈವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ, ‘ಕೊತ್ತಲವಾಡಿ’ ಮೂಲಕ ಕಂಪ್ಲೀಟ್ ಮಾಸ್ ಅವತಾರ ತಾಳಿದ್ದಾರೆ.

ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಮತ್ತು ಹಿನ್ನೆಲೆ ಸಂಗೀತ ಅಭಿನಂದನ್ ಕಶ್ಯಪ್ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ ಈ ಚಿತ್ರಕ್ಕಿದೆ. ಡಾ. ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್‌ಪೀರ್ ಸಾಹಿತ್ಯ ಬರೆದಿದ್ದಾರೆ.

Previous articleಕಾರ್ಮಿಕರಿಗೆ ಸಿಹಿ ಸುದ್ದಿ: ಶೀಘ್ರದಲ್ಲಿ ಹೊಸ ಗಿಗ್ ಬಿಲ್ ಜಾರಿ
Next articleಬಿಜೆಪಿ ಟಾರ್ಗೆಟ್‌ ಲಿಸ್ಟ್‌ನಲ್ಲಿ ನಾನೂ ಸೇರಿ 55 ʼಕೈʼ ಶಾಸಕರು