ಐವರು ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕ, ವಿವರ ಇಲ್ಲಿದೆ

0
96

ನವದೆಹಲಿ: ಕರ್ನಾಟಕ ಹೈಕೋರ್ಟ್‌ ಸೇರಿ ಐದು ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಮೇ ತಿಂಗಳಲ್ಲಿ ಈ ಶಿಫಾರಸುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಕೊಲಿಜಿಯಂ ಮಾಡಿದೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು, ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ, ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್, ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಅಶುತೋಷ್ ಕುಮಾರ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಂಚೋಲಿ ನೇಮಕವಾಗಿದ್ದಾರೆ.

ಐವರು ಮುಖ್ಯ ನ್ಯಾಯಮೂರ್ತಿಗಳ ನೇಮಕದ ಜತೆಗೆ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ ಮಾಡಲಾಗಿದೆ.

ಭಾರತದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಹಿರಿಯ ನ್ಯಾಯಾಧೀಶರ ಗುಂಪು ಕೊಲಿಜಿಯಂ ವ್ಯವಸ್ಥೆಯಾಗಿದೆ. ಈ ವ್ಯವಸ್ಥೆ ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರ ನೇಮಕಾತಿ, ವರ್ಗಾವಣೆಗಳನ್ನು ಆಯ್ಕೆ ಮಾಡುತ್ತದೆ. ಬಳಿಕ ಇವರ ಶಿಫಾರಸುಗಳನ್ನು ಅಂತಿಮವಾಗಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಕಳಿಸಲಾಗುತ್ತದೆ.

Previous articleಆಸ್ತಿ, ವಾಹನದ ಬಗ್ಗೆ ಸುಳ್ಳು ಮಾಹಿತಿ, ಜೈಲಿಂದ ಹೊರಬಂದ ಜನಾರ್ದನ ರೆಡ್ಡಿಗೆ ನೋಟಿಸ್!
Next articleಸಿಂಗದೂರು ಕಾರ್ಯಕ್ರಮಕ್ಕೆ ಗೈರಾಗಿದ್ದ ಸಿಎಂ, ವಿಜಯಪುರದಲ್ಲಿ ಸಾವಿರಾರು ಕೋಟಿ ರೂ.ಗಳ ಶಂಕುಸ್ಥಾಪನೆ

LEAVE A REPLY

Please enter your comment!
Please enter your name here