ಕೆಪಿಸಿಎಲ್‌ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ

0
89

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ. ಕೆಪಿಸಿಎಲ್ ಅಧ್ಯಕ್ಷನಾಗಿ ನಾನೂ ಕೂಡ ಕೆಪಿಸಿಎಲ್ ನೌಕರರಲ್ಲಿ ಒಬ್ಬನಾಗಿದ್ದೀನಿ. ಅತೀ ಹೆಚ್ಚು ಕಾಲ ಕೆಪಿಸಿಎಲ್ ಅಧ್ಯಕ್ಷನಾಗಿ ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿಯಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ನಡೆದ ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ ಸೌರ, ಉಷ್ಣ ಹಾಗೂ ಜಲ ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ವಾರ್ಷಿಕ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ.

ಕರ್ನಾಟಕ ವಿದ್ಯುತ್ ನಿಗಮದ 56ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು, ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಾರ್ಷಿಕ ಸುಮಾರು 20 ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು

ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಕೆಪಿಸಿಎಲ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡದವರು ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ನಮ್ಮ ಮೇಲೆ, ಅಧಿಕಾರಿಗಳ ಮೇಲೆ ಸಮಾಜದ ಋಣ ಇದೆ. ನಾವಾಗಲೀ, ಅಧಿಕಾರಿಗಳಾಗಲೀ ಸಮಾಜದ ಹಣದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಸಮಾಜದ ಋಣ ತೀರಿಸುವ ಕಾಳಜಿಯಿಂದ ಕೆಲಸ ಮಾಡಬೇಕಿದೆ.

ನಾನು ಓದುವಾಗ ಊರಲ್ಲಿ ಕರೆಂಟ್ ಇರಲಿಲ್ಲ. ಸೀಮೆಎಣ್ಣೆ ದೀಪದಲ್ಲಿ ಓದಿ ಮೇಲೆ ಬಂದೆವು. ನಾನು 8ನೇ ತರಗತಿಗೆ ಬಂದಾಗ ಊರಿಗೆ ಕರೆಂಟ್ ಬಂತು. ಈಗ ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣವನ್ನು ರೈತರ ಪರವಾಗಿ ಸರ್ಕಾರ ಕೊಡುತ್ತಿದೆ. ಕೆಪಿಸಿಎಲ್ ನೌಕರರ ಶ್ರಮದಿಂದ ವಿದ್ಯುತ್ ರೈತರಿಗೆ ತಲುಪುತ್ತಿದೆ.

ಪವನ, ಸೌರ, ಉಷ್ಣ, ಜಲ ವಿದ್ಯುತ್ ಉತ್ಪಾದನೆ ಜೊತೆಗೆ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದನೆ ಮಾಡುತ್ತಾ ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದ್ದು ಸ್ವಾವಲಂಬನೆ ಸಾಧಿಸಿದ್ದೀವಿ. 60 ಸಾವಿರ ಮೆ.ವ್ಯಾ ಉತ್ಪಾದನೆ ಮಾಡುವ ಗುರಿ ಎಡೆಗೆ ನಾವು ಸಾಗುತ್ತಿದ್ದೇವೆ. ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎನ್ನುವ ವರದಿಗಳು ಬಂದಿವೆ. ಈ ಸಾಧನೆ ನಾವು ಮಾಡಿದ್ದೇವೆ.

ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು, ರಾಜ್ಯದಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ಸಂಗ್ರಹಣಾ ವ್ಯವಸ್ಥೆಯ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಶರಾವತಿಯಲ್ಲಿ 2 ಸಾವಿರ ಮೆಗಾ ವ್ಯಾಟ್ ಮತ್ತು ವಾರಾಹಿಯಲ್ಲಿ 1 ಸಾವಿರದ 500 ಮೆಗಾ ವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.

ಶರಾವತಿ ಯೋಜನೆ ಹಾಗೂ ವಾರಾಹಿಯ ಎರಡು ಯೋಜನೆಗಳಿಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಸಿಕ್ಕಿದೆ ಎಂದು ತಿಳಿಸಿದರು.

Previous articleಉಪರಾಷ್ಟ್ರಪತಿ ಆಯ್ಕೆ ಹೇಗೆ?: ಎಷ್ಟು ಮತ ಬೇಕು, ಠೇವಣಿ ಎಷ್ಟು?
Next articleಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ

LEAVE A REPLY

Please enter your comment!
Please enter your name here