ಕರ್ನಾಟಕದಲ್ಲಿ ಇನ್ನೂ ಒಂದು ವಾರ ಮಳೆ ಅಬ್ಬರ: ರೆಡ್ ಅಲರ್ಟ್

0
117

ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ, ಜುಲೈ 28ನಂತರ ಮಳೆ ಚಟುವಟಿಕೆ ಕಡಿಮೆಯಾಗುವ ಸಾದ್ಯತೆ ಇದೆ.

ಪ್ರಸ್ತುತ ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಅತಿ ಭಾರಿ ಹಾಗೂ ಅತ್ಯಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರೆಡ್ ಅಲರ್ಟ್‌: ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ, ಕುಮಟಾ, ಹೊನ್ನಾವರ ಭಾಗದಲ್ಲಿ 120 ಮಿಲೀ ಮೀಟರ್​ಗೂ ಹೆಚ್ಚು ಮಳೆ ಸುರಿದಿದೆ. ಶರಾವತಿ, ಅಘನಾಶಿನಿ, ಗುಂಡ್ಲಬಾಳ ನದಿಗಳು ಅಪಾಯ ಮಟ್ಟ ಮೀರಿ ಹರಿದು ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್ ಅಲರ್ಟ್‌ ನೀಡಲಾಗಿದ್ದು, ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್‌, ಯೆಲ್ಲೋ ಅಲರ್ಟ್​: ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮೀನುಗಾರಿಕೆಗೆ ತೆರಳದಂತೆ ಸೂಚನೆ: ಉಡುಪಿ-ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉಡುಪಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ದಿನಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಕರಾವಳಿಯುದ್ದಕ್ಕೂ ಸವೆತ ಮತ್ತು ಅಲೆಗಳಿಂದ ಅಪಾಯವಿರುವುದರಿಂದ ಹತ್ತಿರದ ತೀರದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಮನವಿ ಮಾಡಲಾಗಿದೆ.

ಎಚ್ಚರಿಕೆ: ನಿರಂತರ ಮಳೆಯಿಂದಾಗಿ ಜಲಾಶಯಗಳೂ ತುಂಬಿದ್ದು ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚಿದ್ದು, ಇಂದು ನದಿಗೆ ನೀರು ಬಿಡುವ ಸೂಚನೆ ನೀಡಲಾಗಿದೆ ಇದರಿಂದ ಹೊರಹರಿವು 60,000 ಕ್ಯೂಸೆಕ್ಸ್ ನಿಂದ 90,000 ಕ್ಯೂಸೆಕ್ಸ್ ವರೆಗೆ ಬದಲಾಗಬಹುದಾಗಿದ್ದು ತುಂಗಭದ್ರಾ ಅಣೆಕಟ್ಟೆಯ ಕೆಳಬಾಗದಲ್ಲಿ ನದಿ ಪಾತ್ರದ ಜನವಸತಿಗಳು ಜಾಗ್ರತೆ ವಹಿಸಲು ಇಲಾಖೆ ತಿಳಿಸಿದೆ.

Previous articleಉತ್ತರ ಕರ್ನಾಟಕ-ಬೆಂಗಳೂರು ನಡುವೆ ವಿಶೇಷ ರೈಲು, ವೇಳಾಪಟ್ಟಿ
Next articleNamma Metro: ಬೆಟ್ಟಹಲಸೂರು ನಿಲ್ದಾಣ ಬೇಡಿಕೆ, ಒಪ್ಪಲಿದೆಯೇ ಬಿಎಂಆರ್‌ಸಿಎಲ್?

LEAVE A REPLY

Please enter your comment!
Please enter your name here