ಬೆಳಗಾವಿ: ಬೆಳಗಾವಿ ಹಿರಿಯ ನ್ಯಾಯವಾದಿ ಎಂ.ಆರ್.ಕುಲಕರ್ಣಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಪತ್ನಿ, ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.
ಕರ್ನಾಟಕ ಲಾ ಸೊಸೈಟಿ ಕಾರ್ಯದರ್ಶಿಯಾಗಿ, ಚೇರಮನ್ ಆಗಿ, ಕರ್ನಾಟಕ ಲಾ ಸೊಸೈಟಿಯ ಎಲ್ಲ ಅಂಗ ಸಂಸ್ಥೆಗಳ ಆಡಳಿತ ಮಂಡಳಿ ಚೇರಮನ್ ಆಗಿ ಅವರು ಸೇವೆ ಸಲ್ಲಿಸಿದ್ದರು.