ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದು ಹರಿಹರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಎಸ್. ರಾಮಪ್ಪ ಚುನಾವಣೆಗೂ ಮೊದಲೇ ಪಕ್ಷಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಿದ್ದು ಸ್ವ-ಪಕ್ಷದವರು ಮತ್ತು ನಮ್ಮ ಸಮಾಜದವರು. ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದು ಬಹುತೇಕ ಖಚಿತ. ಹಾಗೊಂದು ವೇಳೆ ಪಕ್ಷದಿಂದ ಟಿಕೆಟ್ ತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.
ಕಳೆದ ಬಾರಿ ನಿಗಮಮಂಡಳಿ ಅಧ್ಯಕ್ಷ ಸ್ಥಾನವನ್ನು ನನ್ನ ಕೈತಪ್ಪುವಂತೆ ಕೆಲವರು ಮಾಡಿದರು. ಈಗಲೂ ಅದನ್ನೇ ಮಾಡುತ್ತಿದ್ದಾರೆ. ಆದರೆ, ಈಗ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ನನ್ನ ಹೆಸರಿರುವುದು ನಿಜ. ನಿಗಮ ಮಂಡಳಿಯಲ್ಲಿ ಸ್ಥಾನ ಸಿಗುವ ಬಗ್ಗೆ ಭರವಸೆಯಿದೆ ಎಂದರು.