Home Advertisement
Home ಸುದ್ದಿ ರಾಜ್ಯ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗ್ಗೆ ಭಾನು ಮುಷ್ತಾಕ್ ಗೌರವ ವ್ಯಕ್ತಪಡಿಸಲಿ: ಯದುವೀರ್‌

ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗ್ಗೆ ಭಾನು ಮುಷ್ತಾಕ್ ಗೌರವ ವ್ಯಕ್ತಪಡಿಸಲಿ: ಯದುವೀರ್‌

0
248

ಮೈಸೂರು: ದಸರಾ ಆಚರಣೆಯ ಮುಖ್ಯ ಅತಿಥಿಯಾಗಿರುವ ಭಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೂ ಮುನ್ನ ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ತಮಗೆ ಇರುವ ಗೌರವವನ್ನು ಸ್ಪಷ್ಟಪಡಿಸಬೇಕು ಎಂದು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಶ್ರೀಮತಿ ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ.” ಎಂದು ತಿಳಿಸಿದ್ದಾರೆ.

“ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವವಾಗಿದೆ.” ಎಂದು ಹೇಳಿದ್ದಾರೆ.

“ಈ ಪವಿತ್ರ ಪರಂಪರೆಯನ್ನು ಗಮನಿಸಿದರೆ, ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಶ್ರೀಮತಿ ಭಾನು ಮುಷ್ತಾಕ್ ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ.” ಎಂದು ಯದುವೀರ್‌ ಹೇಳಿದ್ದಾರೆ.

LEAVE A REPLY

Please enter your comment!
Please enter your name here