ಅಜಯ್: ಯೋಗಿ ಆದಿತ್ಯನಾಥ್ ಜೀವನಾಧರಿತ ಚಿತ್ರ ಬಿಡುಗಡೆಗೆ ಹೈಕೋರ್ಟ್ ಅನುಮತಿ

0
52

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೀವನವನ್ನು ಆಧರಿಸಿದ ಚಲನಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಅನುಮೋದನೆ ನೀಡಿದ್ದು, ಅದರಲ್ಲಿ ಯಾವುದೇ ಆಕ್ಷೇಪಾರ್ಹ ಅಂಶ ಕಂಡುಬಂದಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ನೀಲಾ ಗೋಖಲೆ ಅವರಿದ್ದ ಪೀಠವು, ‘ಅಜಯ್: ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಎ ಯೋಗಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶನ ನೀಡಿತು ಮತ್ತು ಯಾವುದನ್ನೂ ಮರು ಸಂಕಲನ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ನ್ಯಾಯಾಲಯವು ಚಿತ್ರವನ್ನು ನೋಡಿದೆ ಮತ್ತು ಅದರಲ್ಲಿ ಯಾವುದೇ ಆಕ್ಷೇಪಾರ್ಹ ಅಂಶ ಕಂಡುಬಂದಿಲ್ಲ ಎಂದು ಪೀಠ ಹೇಳಿದೆ. ಚಿತ್ರದ ದೃಶ್ಯಗಳಿಗೆ ಕತ್ತರಿ ಪ್ರಯೋಗ ಮಾಡುವಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಹೊರಡಿಸಿದ್ದ ಆದೇಶಗಳನ್ನು ಅದು ರದ್ದುಗೊಳಿಸಿದೆ. ಸಿಬಿಎಫ್‌ಸಿ ʼಪರಿಶೀಲನಾ ಸಮಿತಿʼ ಹಲವು ದೃಶ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

Previous articleಸದನದಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳಿದ ಡಿ.ಕೆ.ಶಿವಕುಮಾರ್‌
Next articleಮಂತ್ರಾಲಯದ ಶ್ರೀಗಳವರಿಂದ ಪರಿಸರಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

LEAVE A REPLY

Please enter your comment!
Please enter your name here