ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಸಿಎಂ, ಡಿಸಿಎಂ ಸೇರಿ 75 ಸದಸ್ಯರು

0
58

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ ಸರಕಾರ ಆದೇಶಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾಗಿರುವ ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಭೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಜಮೀರ್ ಅಹಮ್ಮದ್ ಖಾನ್‌, ಲೋಕಸಭಾ ಸದಸ್ಯ ಡಾ.ಸಿ.ಎನ್. ಮಂಜುನಾಥ್, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ರಾಜ್ಯ ಸಭಾ ಸದಸ್ಯ ನಾರಾಯಣ ಕೊರಗಪ್ಪ, ನಟ ಜಗ್ಗೇಶ್, ಜಿ.ಸಿ ಚಂದ್ರಶೇಖರ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಬೆಂಗಳೂರಿನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿ ಒಟ್ಟು 75 ಜನರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರುಗಳಾಗಿದ್ದಾರೆ. ಜೊತೆಗೆ ಹಿರಿಯ ಐಎಎಸ್ ಅಧಿಕಾರಿಗಳು ಕೂಡ ಪ್ರಾಧಿಕಾರದ ಸದಸ್ಯರಾಗಿದ್ದಾರೆ.

Previous articleಬೆಳಗಾವಿ: ಮಹಾರಾಷ್ಟ್ರದಿಂದ ನೀರು, ಪ್ರವಾಹಕ್ಕೆ ಕೊಚ್ಚಿಹೋದ ರಸ್ತೆ
Next articleದಾವಣಗೆರೆ: ವಿದ್ಯಾರ್ಥಿನಿಯ ಏಕಾಂಗಿ ಹೋರಾಟಕ್ಕೆ ತಾಪಂ ಸ್ಪಂದನೆ

LEAVE A REPLY

Please enter your comment!
Please enter your name here