ದರ್ಶನ ಪತ್ನಿ, ಪುತ್ರನ ವಿರುದ್ಧ ಅಶ್ಲೀಲ ಸಂದೇಶ: ಪೊಲೀಸ್‌ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ

0
28

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಆಯೋಗಕ್ಕೆ ಬಂದಿರುವ ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡು, ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಸೂಚಿಸಿದೆ.

ಸಾಮಾಜಿಕ ಹೋರಾಟಗಾರ, ನೆಲಮಂಗಲದ ಭಾಸ್ಕರ್ ಪ್ರಸಾದ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಅರ್ಜಿಯಲ್ಲಿ “ನಟ ದರ್ಶನ್ ರವರ ಧರ್ಮಪತ್ನಿಯಾದ ವಿಜಯಲಕ್ಷ್ಮಿ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ.”

“ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ” ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಅವರು, “ಅರ್ಜಿದಾರರ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 15 ಸೂಕ್ತ ದಿನಗಳೊಳಾಗಿ ಸಲ್ಲಿಸುವಂತೆ ಕೋರಿದೆ.” ಎಂದು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

Previous articleಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಸುಬೇದಾರ್
Next articleಕುಂಕುಮ ಇಟ್ಟು, ಮಲ್ಲಿಗೆ ಮುಡಿದು ದಸರಾ ಉದ್ಘಾಟಿಸಿ:‌ ಬಾನುಗೆ ಪ್ರತಾಪ್ ಸವಾಲು

LEAVE A REPLY

Please enter your comment!
Please enter your name here