ಮೈಸೂರು ದಸರಾ 2025: ವಿವಾದದ ನಡುವೆ ಬಾನು ಮುಷ್ತಾಕ್‌ಗೆ ದಸರಾಕ್ಕೆ ಅಧಿಕೃತ ಆಹ್ವಾನ

0
24

ಹಾಸನ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟಕರಾಗಿ ಆಯ್ಕೆಯಾಗಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬುಧವಾರ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.

ಸೆಪ್ಟೆಂಬರ್ 22ರಿಂದ 11 ದಿನಗಳ ಕಾಲ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.‌

Previous articleಕೊಪ್ಪಳ: ಅಂಜನಾದ್ರಿ ಭಕ್ತರಿಗೆ ಬಂಪರ್ ಕೊಡುಗೆ ಕೊಟ್ಟ ರಾಜ್ಯ ಸರ್ಕಾರ
Next articleಬಾಗಲಕೋಟೆ: ಬಾದಾಮಿ ತಾಲೂಕಿನ ಕಾಕನೂರಿನಲ್ಲಿ ಎಸ್‌ಬಿಐ ಶಾಖೆಗೆ ಕನ್ನ ಹಾಕಿದ ಕಳ್ಳರು

LEAVE A REPLY

Please enter your comment!
Please enter your name here