ಹಾಸನ: ಗಣೇಶೋತ್ಸವ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ – ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

0
50

ಹಾಸನ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘೋರ ದುರಂತವು ದೇಶವನ್ನೇ ತಲ್ಲಣಗೊಳಿಸಿದೆ. ಈ ದುರಂತದಲ್ಲಿ ಹಲವರು ದುರ್ಮರಣ ಹೊಂದಿದರೆ, ಅನೇಕರಿಗೆ ಗಾಯಗಳಾಗಿವೆ. ಘಟನೆಯು ನಡೆದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಕಚೇರಿ (PMO) ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ (ಹಿಂದಿನ ಟ್ವಿಟರ್) ಹಂಚಿಕೊಂಡ ಪೋಸ್ಟ್‌ನಲ್ಲಿ, “ಹಾಸನದಲ್ಲಿ ಸಂಭವಿಸಿದ ಘಟನೆ ನಿಜಕ್ಕೂ ಹೃದಯವಿದ್ರಾವಕ. ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ, ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್ (Prime Minister’s National Relief Fund) ನಿಂದ ತಲಾ ₹2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ.

ಘಟನೆ: ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬಾರಿ ಸಂಖ್ಯೆಯಲ್ಲಿದ್ದ ಜನರ ಮೇಲೆ ನುಗ್ಗಿದ ಪರಿಣಾಮ 9 ಮಂದಿ ಸಾವನ್ನಪ್ಪಿ 20ಕ್ಕೆ ಹೆಚ್ಚು ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.ಸದ್ಯ ಹಾಸನದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲವರ ಸ್ಥಿತಿ ಈಗಲೂ ಚಿಂತಾ ಜನಕವಾಗಿದೆ.ತೀವ್ರವಾಗಿ ಗಾಯಗೊಂಡಿರುವ ಕೆಲವರನ್ನು ICUನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಅಕಸ್ಮಾತ್ ಸಂಭವಿಸಿದ ಅಹಿತಕರ ಘಟನೆ ಹಲವರ ಜೀವವನ್ನು ಬಲಿ ಪಡೆದಿದೆ. ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Previous articleಧಾರವಾಡ ಕೃಷಿ ವಿವಿಯಲ್ಲಿ ಅನ್ನದಾತನ ಹಬ್ಬಕ್ಕೆ ಸಕಲ ಸಿದ್ಧತೆ
Next articleದಾಂಡೇಲಿ: ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆಗೆ ವಿರೋಧ – ಆನ್‌ಲೈನ್‌ ಅಂದೋಲನ

LEAVE A REPLY

Please enter your comment!
Please enter your name here